ನನ್ನ ಬಳಿ ಡಿ.ಕೆ. ಶಿವಕುಮಾರ್ ಸಿಡಿ ಇದೆ: ಹೊಸ ಬಾಂಬ್ ಸಿಡಿಸಿದ ಲಖನ್ ಜಾರಕಿಹೊಳಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನನ್ನ ಬಳಿ ಡಿ.ಕೆ ಶಿವಕುಮಾರ್ ಸಿ.ಡಿ ಇದೆ ಎಂದು ಎಂಎಲ್ಸಿ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.

ತಮ್ಮ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿ ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ, ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!