ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಭಾಷೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ತಾನು ಹೇಳಿದ ಹೇಳಿಕೆ ತಪ್ಪಾಗಿದ್ದರೆ ಮಾತ್ರ ನಾನು ಕ್ಷಮೆ ಕೇಳುತ್ತೇನೆ. ನಾನು ಹೇಳಿರುವುದು ಯಾವುದೂ ತಪ್ಪಲ್ಲ ಎಂದು ಅವರು ಹೇಳಿದ್ದಾರೆ.
ಸುಮ್ಮನೆ ವಿವಾದವನ್ನು ಸೃಷ್ಠಿಸಲಾಗಿದೆ. ಜನರು ಇದರಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಇತ್ತ ಫಿಲಂ ಚೇಂಬರ್ ಹಾಗೂ ಕೆಲ ಕನ್ನಡಪರ ಸಂಘಟನೆಗಳು, ‘ಕಮಲ್ ಹಾಸನ್ ಕ್ಷಮೆ ಕೇಳದ ಹೊರತು ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿವೆ.
ಚೆನ್ನೈನಲ್ಲಿ ಈ ಬಗ್ಗೆ ಮಾತನಾಡಿರುವ ನಟ ಕಮಲ್ ಹಾಸನ್, ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ. ‘ನನ್ನಿಂದ ತಪ್ಪು ಆಗಿದ್ದರೆ ಮಾತ್ರ ಕ್ಷಮೆಯಾಚಿಸುವೆ, ನನ್ನಿಂದ ತಪ್ಪು ಆಗಿಲ್ಲ, ಹಾಗಾಗಿ ನಾನು ಕ್ಷಮೆ ಕೇಳಲ್ಲ, ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ, ನಾನು ಕಾನೂನು & ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ.
ಕಮಲ್ ಹಾಸನ್ ಹೇಳಿಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. . ಹಿರಿಯ ನಟರಾದ ಜಗ್ಗೇಶ್, ಸುಮಲತಾ, ಜಯಮಾಲಿನಿ, ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ರಮ್ಯಾ, ನಟ ಚೇತನ್ ಅಹಿಂಸ ಇನ್ನೂ ಕೆಲವರು ಕಮಲ್ ಹಾಸನ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.