ನಿಮ್ಮ ಹಕ್ಕನ್ನು ನೀಡುವ ಭರವಸೆಯನ್ನು ಈಡೇರಿಸಿದ್ದೇನೆ: ಕೇರಳದಲ್ಲಿ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ವಾತಂತ್ರ್ಯದ ನಂತರ, ಎಲ್‌ಡಿಎಫ್ ಮತ್ತು ಯುಡಿಎಫ್ ಸರ್ಕಾರಗಳು ‘ನಾರಿ ಶಕ್ತಿ’ಯನ್ನು ದುರ್ಬಲವೆಂದು ಪರಿಗಣಿಸಿದವು. ಅಲ್ಲದೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾನೂನನ್ನು ಅವರು ತಡೆಹಿಡಿದರು. ಆದರೆ ಮೋದಿ ನಿಮಗೆ ನಿಮ್ಮ ಹಕ್ಕುಗಳನ್ನು ನೀಡುವ ಭರವಸೆ ನೀಡಿದರು ಮತ್ತು ಅದನ್ನು ಈಡೇರಿಸಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೇರಳದಲ್ಲಿ ನಗರದಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ನಾರಿ ಶಕ್ತಿ ವಂದನಾ ಅಭಿಯಾನ ಇದೀಗ ಕಾನೂನಾಗಿ ಬದಲಾಗಿದೆ.ಮಹಿಳಾ ಮೀಸಲು ಮಸೂದೆಗಳ ಜಾರಿ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಎಡ ಪಕ್ಷಗಳು ವಿಳಂಬ ಧೋರಣೆ ಅನುಸರಿಸಿದವು. ಆದರೂ, ಬಿಜೆಪಿಯು ಮಹಿಳೆಯರ ಸಬಲೀಕರಣಕ್ಕಾಗಿ ಮಸೂದೆಯನ್ನು ಅಂಗೀಕರಿಸಿದೆ ಎಂದು ಹೇಳಿದ್ದಾರೆ.

‘ಸ್ವಾತಂತ್ರ್ಯಾನಂತರ ಎಡಪಂಥೀಯ ಕಾಂಗ್ರೆಸ್‌ ಸರ್ಕಾರ ನಮ್ಮ ಮಹಿಳೆಯರ ಸಾಮರ್ಥ್ಯನ್ನು ದುರ್ಬಲಗೊಳಿಸಿರುವುದು ವಿಷಾದನೀಯ. ಕಾಂಗ್ರೆಸ್ ಹಾಗೂ ಇತರ ಪಕ್ಷಗಳು, ಮಹಿಳೆಯರಿಗೆ ಅಧಿಕಾರ ನೀಡುವ ಮೀಸಲು ಮಸೂದೆಯು ಲೋಕಸಭೆಯಲ್ಲಿ ಶೀಘ್ರ ಜಾರಿಯಾಗದಂತೆ ಮಾಡಿದವು. ಆದಾಗ್ಯೂ, ನಾರಿ ಶಕ್ತಿ ವಂದನಾ ಅಭಿಯಾನ ಇದೀಗ ಕಾನೂನು ಆಗಿದೆ. ಮೋದಿ ತಮ್ಮ ಬದ್ಧತೆ ಪೂರೈಸಿದ್ದಾರೆ’ ಎಂದು ತಿಳಿಸಿದ್ದಾರೆ.

ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಪ್ರಗತಿಯು ರಾಷ್ಟ್ರೀಯ ಬೆಳವಣಿಗೆಯನ್ನು ಖಾತ್ರಿಪಡಿಸಲಿದೆ . ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿ ‘ಮೋದಿಯ ಗ್ಯಾರಂಟಿ’ಗಳ ಸುತ್ತ ಚರ್ಚೆ ನಡೆಯುತ್ತಿದೆ ಎಂದು ಒತ್ತಿ ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರಿಗೆ ತ್ರಿವಳಿ ತಲಾಖ್‌ನಿಂದ ಮುಕ್ತಿ ನೀಡುವ ಗ್ಯಾರಂಟಿಯನ್ನೂ ನಾವು ಪ್ರಾಮಾಣಿಕವಾಗಿ ಈಡೇರಿಸಿದ್ದೇವೆ ಎಂದು ನೆನಪಿಸಿದ್ದಾರೆ.

 

ಇಂಡಿಯಾ (INDIA Alliance) ಮೈತ್ರಿ ಕೂಟ ವಿರುದ್ಧ ವಾಗ್ದಾಳಿ ನಡೆಸಿದ ಅವರು,ತ್ರಿ ಕೂಟ ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ. ಅವರು ನಮ್ಮ ದೇವಸ್ಥಾನಗಳು ಮತ್ತು ಹಬ್ಬಗಳನ್ನು ಲೂಟಿಗೆ ದಾರಿಮಾಡಿಕೊಂಡಿದ್ದಾರೆ. ‘ತ್ರಿಶೂರ್ ಪೂರಂ’ನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ. ಶಬರಿಮಲೆಯಲ್ಲಿ (Sabarimala) ನಡೆದಿರುವ ದುರಾಡಳಿತದಿಂದ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಇಲ್ಲಿಯ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಎಂದು ಉಲ್ಲೇಖಿಸಿದ್ದಾರೆ.

ಇಂದು ದೇಶದಲ್ಲಿ ದೊಡ್ಡ ದೊಡ್ಡ ರಸ್ತೆಗಳು ನಿರ್ಮಾಣವಾಗುತ್ತಿವೆ. ಆಧುನಿಕ ರೂಪದಲ್ಲಿ ವಿಮಾನ ನಿಲ್ದಾಣಗಳು ನಿರ್ಮಾಣವಾಗುತ್ತಿವೆ. ಆದರೆ ಮೋದಿಯವರನ್ನು ವಿರೋಧಿಸುತ್ತೇವೆ ಎಂಬ ಕಾರಣಕ್ಕೆ ಇಂಡಿಯಾ ಮೈತ್ರಿಕೂಟ ಸರ್ಕಾರ ಇಲ್ಲಿ ಯಾವುದೇ ಕೆಲಸ ನಡೆಯಲು ಬಿಡುತ್ತಿಲ್ಲ. ಲೂಟಿಗೆ ಕೇರಳದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬೇಕು. ಕೇಂದ್ರ ಸರ್ಕಾರದಿಂದ ಬಡವರಿಗೆ ಮತ್ತು ಮೂಲಸೌಕರ್ಯಕ್ಕೆ ಸಿಗುತ್ತಿರುವ ಹಣದ ಬಗ್ಗೆ ಯಾರೂ ಪ್ರಶ್ನಿಸುವುದು ಅವರಿಗೆ ಇಷ್ಟವಿಲ್ಲ. ಈ ಮೂಲಕ ಕೇಂದ್ರದ ಯೋಜನೆಗಳಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!