ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತ ಇಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ದೆಹಲಿಯಲ್ಲಿ ಮಾತನಾಡಿದ ಅವರು, ನನ್ನನ್ನು ಯಾರೂ ಕೂಡ ಟಾರ್ಗೆಟ್ ಮಾಡಿಲ್ಲ, ನನಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಕ್ಕಿದೆ.ಕೇಂದ್ರದ ನಾಯಕರು ನನ್ನನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಹೇಳಿದರು.
ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚಿಸಲು ಹೈಕಮಾಂಡ್ ಬುಲಾವ್ ಮೇರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಮುಹೂರ್ತ ನಿಗದಿಯಾಗಿದೆ.ವಿಪಕ್ಷ ನಾಯಕನ ಆಯ್ಕೆ, ರಾಜ್ಯಾಧ್ಯಕ್ಷರ ನೇಮಕ ಸೇರಿದಂತೆ ಎಲ್ಲಾ ವಿಚಾರಗಳನ್ನು ವರಿಷ್ಠರ ಜೊತೆ ಚರ್ಚಿಸುತ್ತೇನೆ. ರಾತ್ರಿ 8 ಗಂಟೆಗೆ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ ಎಂದರು.