ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮೀ ಯೋಜನೆಯನ್ನು ಜಾರಿ ಮಾಡದಂತೆ ನಾನೇ ತಡೆಹಿಡಿದಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಗೃಹಲಕ್ಷ್ಮಿ ಯೋಜನೆ ವಿಳಂಬ ವಿಚಾರಕ್ಕೆ ನಗರದಲ್ಲಿಂದು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಮಾತನಾಡಿ ಗೃಹಲಕ್ಷ್ಮಿ ಯೋಜನೆಯನ್ನು ನಾನೇ ತಡೆಹಿಡಿದಿದ್ದೇನೆ. ಗಲಾಟೆ ಕಡಿಮೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಿದ್ದೇನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೊಂದಿಗೆ ಒಂದು ಸಭೆ ಮಾಡಿ, ಸರಳವಾಗಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದರು.
ಇದೇ ವೇಳೆ ಅವರು ಭ್ರಷ್ಟಾಚಾರ ರಹಿತ ಯೋಜನೆ ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದ್ದಾರೆ. ಒಂದು ವೇಳೆ ಯಾರಾದರು ಲಂಚ ಕೇಳಿದ್ರೆ ನಾವು ಒಂದು ಸಹಾಯವಾಣಿ ಸಂಖ್ಯೆ ಕೊಡ್ತೀವಿ, ಅದಕ್ಕೆ ಕಾಲ್ ಮಾಡಿ ದೂರು ನೀಡಿ ಎಂದು ಸಲಹೆ ನೀಡಿದ್ದಾರೆ.