ಅನ್ನಭಾಗ್ಯಕ್ಕೆ ದಶಕದ ಸಂಭ್ರಮ: ಇದು ಬಡವರ ಹಸಿವು ನೀಗಿಸುವ ಪ್ರಾಮಾಣಿಕ ಪ್ರಯತ್ನ ಎಂದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಂದಿಗೆ 10 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾವನಾತ್ಮಕವಾಗಿ ಟ್ವೀಟ್‌ ಮಾಡಿದ್ದಾರೆ.

ಸಿದ್ದರಾಮಯ್ಯನವರ ಟ್ವಿಟ್ಟರ್‌ ಖಾತೆಯಲ್ಲಿ, “ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ” ಎಂದು ಹೇಳಿದ್ದಾರೆ.

“ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ” ಎಂದು ತಿಳಿಸಿದ್ದಾರೆ.

“ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು” ಎಂದು ಭಾವನಾತ್ಮಕವಾಗಿ ಸಂದೇಶವನ್ನು ಹಂಚಿಕೊಂಡಿದ್ದಾರೆ.

https://twitter.com/siddaramaiah/status/1678307785342337024?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!