September 4, 2026
Friday, September 4, 2026
spot_img

ಸಿದ್ದರಾಮಯ್ಯ ಜತೆ ನನಗೆ ಯಾವ ಭಿನ್ನಾಭಿಪ್ರಾಯವೂ ಇಲ್ಲ: ಹೀಗ್ಯಾಕಂದ್ರು ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಜೊಳಿ ಹೇಳಿದ್ದಾರೆ.

ನಮ್ಮಲ್ಲಿ ಬಿಕ್ಕಟ್ಟಿದೆ ಎಂದು ಯಾರು ಹೇಳಿದ್ದೋ ಗೊತ್ತಿಲ್ಲ. ನಮ್ಮ ಸಂಬಂಧ ಹಿಂದೆ ಹೇಗಿತ್ತೋ ಈಗಲೂ ಹಾಗೇ ಇದೆ. ಇಬ್ಬರೂ ನಾಯಕರು ಒಗ್ಗಟ್ಟಿನಲ್ಲಿ ಇದ್ದೇವೆ. ಭಿನ್ನಾಭಿಪ್ರಾಯದ ಮಾತೇ ಇಲ್ಲ, ಈಗಷ್ಟೇ ಅಲ್ಲ ಮುಂದೆಯೂ ಚೆನ್ನಾಗಿಯೇ ಇರುತ್ತೇವೆ ಎಂದಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಘಟಕದೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು, ವಿಶೇಷವಾಗಿ ಸಿದ್ದರಾಮಯ್ಯ ಅವರಿಗೆ ನಿಷ್ಠರಾಗಿರುವ ಹಿರಿಯ ನಾಯಕರ ಮತ್ತು ಅವರ ನಡುವಿನ ಭಿನ್ನಾಭಿಪ್ರಾಯಗಳ ಬಗ್ಗೆ ಹರಡುತ್ತಿರುವ ಊಹಾಪೋಹಗಳ ಮಧ್ಯೆ ಸತೀಶ್ ಸ್ಪಷ್ಟನೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !