ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ, ಆ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಅದಕ್ಕೆ ತಮ್ಮ ಅಭ್ಯಂತರವಿಲ್ಲ ಎಂದು ಉತ್ತರಿಸಿದ್ದಾರೆ.
ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ನನಗೆ ಬೇರೆ ದಾರಿ ಇಲ್ಲ. ನಾನು ಬೆಂಬಲ ನೀಡಲೇಬೇಕು ಮತ್ತು ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನಗಳನ್ನು ಪಾಲಿಸುವುದಾಗಿ ಹೇಳಿದರು.
ಇಂದು ನಂದಿ ಬೆಟ್ಟದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಆಗಮಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ನನಗೆ ಯಾವ ಆಯ್ಕೆ ಇದೆ ? ಬೇರೆ ಮಾರ್ಗ ಇಲ್ಲ. ನಾನು ಅವರಬೆನ್ನಿಗೆ ನಿಂತು ಬೆಂಬಲಿಸುತ್ತೇನೆ. ಅವರು ಸಿಎಂ ಆಗಿ ಮುಂದುವರೆಯುವುದಕ್ಕೆ ನನಗೆ ಯಾವುದೇ ಆಕ್ಷೇಪವಿಲ್ಲ. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಮಾಡುತ್ತೇನೆ ಎಂದಿದ್ದಾರೆ.