October 13, 2026
Tuesday, October 13, 2026
spot_img

ಶೂ ಎಸೆದಿರುವ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಖಂಡಿತ ಸರಿಯಿದೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶೂ ಎಸೆದಿರುವ ಬಗ್ಗೆ ನನಗೆ ಯಾವುದೇ ಪಶ್ಚಾತ್ತಾಪವಿಲ್ಲ, ನನ್ನ ನಿರ್ಧಾರ ಸರಿಯಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ ರಾಕೇಶ್ ಕಿಶೋರ್ ಸಮರ್ಥಿಸಿಕೊಂಡಿದ್ದಾರೆ.

“ಶೂ ಎಸೆಯಲು ದೇವರೇ ಪ್ರಚೋದನೆ ನೀಡಿದ್ದಾನೆ. ಖಜುರಾಹೊ ಅರ್ಜಿ ವಿಚಾರಣೆ ವೇಳೆ ನ್ಯಾ. ಗವಾಯಿ ಹೇಳಿದ ಅಭಿಪ್ರಾಯದಿಂದ ನನಗೆ ರಾತ್ರಿ ನಿದ್ದೆಯೇ ಬರಲಿಲ್ಲ. ಕಾನೂನು ವ್ಯವಸ್ಥೆಯು ಕಾನೂನಿನ ಆಳ್ವಿಕೆಯಿಂದ ನಿಯಂತ್ರಿಸಲ್ಪಡುತ್ತದೆಯೇ ಹೊರತು ಬುಲ್ಡೋಜರ್ ನಿಯಮದಿಂದ ಅಲ್ಲ ಎಂದು ಗವಾಯಿ ಹೇಳಿಕೆಯಿಂದ ನನಗೆ ಅಸಮಾಧಾನವಾಗಿತ್ತು, ನಾನು ಜೈಲು ಶಿಕ್ಷೆ ಎದುರಿಸಲು ಸಿದ್ಧ. ಈ ಕೃತ್ಯಕ್ಕೆ ನಾನು ಕ್ಷಮೆಯಾಚಿಸಲ್ಲ. ಅಷ್ಟೇ ಅಲ್ಲದೇ ಯಾವುದೇ ರಾಜಕೀಯ ಪಕ್ಷದೊಂದಿಗೆ ನಾನು ಸಂಬಂಧ ಹೊಂದಿಲ್ಲ” ಎಂದು ನೇರವಾಗಿ ತಿಳಿಸಿದ್ದಾರೆ.

Must Read