ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ: ಡಿಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ರಾಮಮಂದಿರ (Ayodhya Ram Mandir) ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shiva Kumar) ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನ ಸಹ ಕರೆದಿಲ್ಲ. ನಾನು ಶಿವ ಭಕ್ತ, ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ. ನಮ್ಮ ಅಕ್ಕಿಯನ್ನ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ, ಅನ್ನಭಾಗ್ಯ ಯೋಜನೆ ಅಕ್ಕಿ ಬಳಸ್ತಿದ್ದಾರೆ ಎಂದರು.

ಅರಿಶಿನ ಅಕ್ಕಿ ಸೇರಿಯೇ ಮಂತ್ರಾಕ್ಷತೆ. ನಮ್ಮ ಅನ್ನಭಾಗ್ಯ ಯೋಜನೆಯಿಂದಲೇ ಅಕ್ಷತೆ ಆಗುತ್ತಿದೆ. ಇದು ಸಂತಸದ ವಿಚಾರವಾಗಿದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!