Tuesday, August 16, 2022

Latest Posts

ನಾನು ಪಕ್ಷದಲ್ಲಿ ಉಳಿದುಕೊಳ್ಳುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ: ಶಾಸಕ ಜಿ.ಟಿ.ದೇವೇಗೌಡ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್‌ಡಿ.ದೇವೇಗೌಡ ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದಾಗಿ  ಹೇಳಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನು ಎರಡು ವರ್ಷವಿದೆ. ಹಾಗಾಗಿ ಈಗಲೇ ಏನು ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ಭಾನುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನಗೆ ದೂರವಾಣಿ ಕರೆ ಮಾಡಿದ್ದರು. ನೀನು, ಸಿಎಸ್.ಪುಟ್ಟರಾಜು, ವಾಸುವನ್ನು ಪಕ್ಷದಲ್ಲೇ ಉಳಿಸಿಕೊಳ್ಳುತ್ತೇನೆ. ನಾನು ಮತ್ತೊಮ್ಮೆ ಪಕ್ಷ ಕಟ್ಟುತ್ತೇನೆ. 2023ರಕ್ಕೆ ಪಕ್ಷ ಅಧಿಕಾರಕ್ಕೆ ತಂದು ನಿವೃತ್ತಿ ಆಗುತ್ತೇನೆ ಎಂದಿದ್ದಾರೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

2008ರ ಹುಣಸೂರು ಚುನಾವಣೆಯಲ್ಲಿ ನನಗೆ ಆಗಿರುವ ಸೋಲಿನ ಅನುಭವ ನನ್ನ ಮುಂದೆ ಇದೆ. ಮತದಾರರ ಅಭಿಪ್ರಾಯ ಕೇಳದೆ 2008 ರಲ್ಲಿ ಸೋತಿದ್ದೇನೆ. ಈಗ ಮತದಾರರನ್ನ ಬಿಟ್ಟು, ನಾನು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಮತದಾರರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ಹೇಳಿದರು.

ಎರಡು ವರ್ಷಗಳಿಂದ ಜೆಡಿಎಸ್ ಪಕ್ಷದ ಸಭೆಗಳಲ್ಲಿ ಪಾಲ್ಗೊಂಡಿಲ್ಲ. ಮುಂದೆ ಬಿಜೆಪಿ ಅಥವಾ ಕಾಂಗ್ರೆಸ್ ಸೇರಬೇಕೋ ಜೆಡಿಎಸ್‌ನಲ್ಲೇ ಇರಬೇಕೋ ಎಂಬುದರ ಬಗ್ಗೆ ತೀರ್ಮಾನ ಮಾಡಿಲ್ಲ. ಪಕ್ಷೇತರವಾಗಿ ನಿಂತರೂ ಅಚ್ಚರಿ ಪಡಬೇಕಿಲ್ಲ ಎಂದರು.

ನಾನು ಮತ್ತು ನನ್ನ ಮಗ ಹರೀಶ ಇಂಡಿಪೆAಡೆAಟ್ ಆಗಿ ನಿಂತರೂ ಗೆಲ್ಲುತ್ತೇವೆ. ಚಾಮುಂಡೇಶ್ವರಿ, ಚಾಮರಾಜ, ಹುಣಸೂರು, ಕೆ.ಆರ್.ನಗರ ಎಲ್ಲಿ ನಿಂತರೂ ಗೆಲ್ಲುತ್ತೇವೆ. ಜನರ ಪ್ರೀತಿ, ವಿಶ್ವಾಸದಿಂದ ಧೈರ್ಯ ಬಂದಿದೆ. ಸ್ವತಂತ್ರವಾಗಿ ನಿಲ್ಲುವ ಮಾರ್ಗ ಇದ್ದೇ ಇದೆ. ಪಕ್ಷೇತರವಾಗಿ ಸ್ಪರ್ಧಿಸಿದರೂ ಗೆಲ್ಲುತ್ತೇವೆ ಅನ್ನುವ ವಿಶ್ವಾಸ ಇದೆ. ಇಷ್ಟು ವರ್ಷ ರಾಜಕಾರಣ ಮಾಡಿದ್ದರಿಂದ ಧೈರ್ಯ ಬಂದಿದೆ ಎಂದು ಹೇಳಿದ್ದಾರೆ.

ಜನ ಕೂಡ ನಮಗೆ ಪಕ್ಷ ಬೇಡ, ಜಿ.ಟಿ.ದೇವೇಗೌಡರು ಬೇಕು ಅಂತಿದ್ದಾರೆ. ಇನ್ನೂ ಎರಡು ವರ್ಷ ಸಮಯಾವಕಾಶ ಇದೆ. ಸನ್ನಿವೇಶ ನೋಡಿಕೊಂಡು ಸೂಕ್ತ ತೀರ್ಮಾನ ಮಾಡುವುದಾಗಿ ತಿಳಿಸಿದರು.

ಮುಂದಿನ ಜಿಪಂ, ತಾಪಂ ಚುನಾವಣೆ ಹಿನ್ನಲೆಯಲ್ಲಿ ನಮ್ಮ ಬೆಂಬಲಿಗರನ್ನ ಪಕ್ಷೇತರವಾಗಿ ಕಣಕ್ಕೀಳಿಸುವ ಚಿಂತನೆ ಇದೆ. ಈ ಬಗ್ಗೆ ಮುಂದಿನ ವಾರದಿಂದ ಕ್ಷೇತ್ರ ಪ್ರವಾಸ ಕೈಗೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿರುಕು ಮತ್ತು ದುರಸ್ತಿ ಪದದ ನಡುವಿನ ವ್ಯತ್ಯಾಸವೇ ಗೊತ್ತಿಲ್ಲ. ಹೀಗಾಗಿ ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತಾ ಹೇಳಿದ್ದಾರೆ

ಮೊದಲ ಬಾರಿ ಸಂಸದರಾಗಿರುವುದರಿAದ ಪದ ಪ್ರಯೋಗ ಗೊತ್ತಿಲ್ಲದೆ ಏನೇನೋ ಹೇಳಿದ್ದಾರೆ. ಕೆಆರ್‌ಎಸ್ ಉಳಿವಿನ ಬಗ್ಗೆ ಎಲ್ಲರಿಗೂ ಕಾಳಜಿ ಇದೆ. ಕೆಆರ್‌ಎಸ್ ಬಿರುಕು ಬಿಟ್ಟಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ವಿಚಾರದಲ್ಲಿ ಗೊಂದಲ ಸೃಷ್ಟಿಮಾಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕೇವಲ ಮಾತನಾಡುವುದರಿಂದ ಯಾರೂ ಲೀಡರ್ ಆಗಲ್ಲ. ಮಾತನಾಡುವುದರಿಂದಲೇ ಲೀಡರ್ ಆಗುತ್ತೇವೆ ಅಂದುಕೊAಡರೆ ತಪ್ಪಾಗುತ್ತೆ. ಅದನ್ನು ಜನ ಒಪ್ಪೋದಿಲ್ಲ.

ಡ್ಯಾಂ ಬಿರುಕು ಬಿಟ್ಟಿದೆ ಅಂತ ಸುಮಲತಾ ಆರೋಪ ಮಾಡಿದರು.  ಅದನ್ನು ಇಷ್ಟು ಬೆಳೆಸುವ ಅಗತ್ಯ ಇರಲಿಲ್ಲ. ಎರಡೂ ಕಡೆಯಿಂದ ವೈಯುಕ್ತಿಕ ವಿಚಾರಗಳ ಚರ್ಚೆ ನಡೆಯುತ್ತಿತ್ತು.

ಸದ್ಯಕ್ಕೆ ಇಬ್ಬರೂ ಚರ್ಚೆ ನಿಲ್ಲಿಸಿದ್ದಾರೆ. ಇಲ್ಲಿಗೇ ನಿಲ್ಲಿಸೋದು ಒಳ್ಳೆಯದು. ಇಲ್ಲದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತೆ. ಒಬ್ಬರ ಪರ ಹೆಚ್ಚು ಜನ ಇರಬಹುದು. ಮತ್ತೊಬ್ಬರ ಪರ ಕಡಿಮೆ ಜನ ಇರಬಹುದು. ಆದರೆ ಜನ ರೊಚ್ಚಿಗೆದ್ದರೆ ಸಮಸ್ಯೆ ಆಗುತ್ತೆ. ಮತ್ತೆ ಕೆಆರ್‌ಎಸ್ ವಿಚಾರ ಮಾತನಾಡಿದರೆ ಸುಮಲತಾಗೂ ಡ್ಯಾಮೇಜ್ ಆಗುತ್ತೆ, ಜೆಡಿಎಸ್‌ಗೂ ಡ್ಯಾಮೇಜ್ ಆಗುತ್ತೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss