ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂಬುದಾಗಿ ಸಚಿವ ಭೈರತಿ ಸುರೇಶ್ ಸ್ಪಷ್ಟ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ನನಗೆ ಇದುವರೆಗೆ ಇಡಿಯಿಂದ ಯಾವುದೇ ನೋಟಿಸ್ ಬಂದಿಲ್ಲ. ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿಲ್ಲ ಎಂಬುದಾಗಿ ತಿಳಿಸಿದರು.
ಮತ್ತೊಂದೆಡೆ ಮುಡಾ ಅಕ್ರಮ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಇಡಿ ನೋಟಿಸ್ ನೀಡಿದೆ. ಅದರಲ್ಲಿ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ತಿಳಿದು ಬಂದಿದೆ.