ಹೊಸದಿಗಂತ ವರದಿ, ಹುಬ್ಬಳ್ಳಿ:
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಬೆಳಿಗ್ಗೆ ಹೇಳಿದಂತೆ ರಾಜೀನಾಮೆ ನೀಡಲು ನಿರ್ಧಾರ ಕೈಗೊಂಡಿದ್ದೇನೆ. ಆದರೆ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜೀನಾಮೆ ಪತ್ರ ತಯಾರಿಸಲಾಗಿತ್ತು. ಆ ಪತ್ರವನ್ನು ಯಾರೋ ಮೊಬೈಲ್ ನಲ್ಲಿ ಸೆರೆ ಹಿಡಿದು ಈ ರೀತಿ ಮಾಡಿದ್ದಾರೆ. ಸದನದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆ ತುಂಬಾ ನೋವಾಗಿದೆ. ಆದ್ದರಿಂದ ಸ್ನೇಹಿತರ ಹಾಗೂ ಹಿತೈಷಿಗಳ ಸಲಹೆ ಒಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.