ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಸರ್ಕಾರವು ‘ಜಾತಿ ಗಣತಿ’ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವರದಿ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ‘ತಾನು ವರದಿಯನ್ನು ಇನ್ನೂ ನೋಡಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು, ಪ್ರತಿಯೊಂದು ರಾಜ್ಯವೂ ತನ್ನದೇ ಆದ ಕೆಲಸವನ್ನು ಮಾಡುತ್ತದೆ. ಇದನ್ನು ಕೇಂದ್ರ ಸರ್ಕಾರ ಮಾಡಿಲ್ಲ. ರಾಜ್ಯ ಸರ್ಕಾರವು ಸಂಪುಟದಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತದೆ. ಈ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಬಿಡಲಾಗಿದೆ ಎಂದರು.
ವರದಿ ವ್ಯಕ್ತವಾಗುತ್ತಿರುವ ವಿರೋಧದ ಬಗ್ಗೆ ಕೇಳಿದಾಗ, ಅವರಿಂದ ವಿರೋಧ ಇರಬಹುದು. ನಾನು ನನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟದ ವಿಶೇಷ ಸಭೆ ಗುರುವಾರ ವಿವಾದಾತ್ಮಕ ‘ಜಾತಿ ಜನಗಣತಿ’ಯ ಬಗ್ಗೆ ಚರ್ಚಿಸಲಿದೆ’ ಎಂದು ಹೇಳಿದರು.