ಬಿಜೆಪಿ ಸೇರುವ ಕುರಿತು ನಾನು ಈವರೆಗೂ ತೀರ್ಮಾನ ಕೈಗೊಂಡಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ಹೊಸದಿಗಂತ ವರದಿ, ಹುಬ್ಬಳ್ಳಿ:

ನನ್ನ ಮೇಲೆ ಪ್ರಲ್ಹಾದ ಜೋಶಿಯರವರಿಗೆ ಪ್ರೀತಿ ಜಾಸ್ತಿ, ಅದಕ್ಕೆ ಅಷ್ಟು ಕಾಳಜಿ ಮಾಡುತ್ತಾರೆ.
ಬಿಜೆಪಿ ಸೇರುವ ಕುರಿತು ನಾನು ಈವರೆಗೂ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ ವರೆಗೂ ಯಾವುದೇ ನಿರ್ಧಾರವನ್ನು ಸಹ ಕೈಗೊಳ್ಳುವುದಿಲ್ಲ ಎಂದರು. ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಎರಡು ಹೆಸರು ಹೈಕಮಾಂಡ್’ಗೆ ಹೋಗಿದ್ದು, ಅದರಲ್ಲಿ ನನ್ನ ಹೆಸರು ಇದ್ದರೂ ಇರಬಹುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಸಚಿವ ಈಶ್ವರಪ್ಪ ರಾಜೀನಾಮೆ ನೀಡಲ್ಲ ಅಂತಾರೆ, ಕಾಂಗ್ರೆಸ್ ರಾಜೀನಾಮೆ ಪಡೆಯದೇ ಬಿಡಲ್ಲ ಅನ್ನುತ್ತಿದೆ. ಸದನದಲ್ಲಿ ನಡೆಯುತ್ತಿರುವ ಬಿಜೆಪಿ, ಕಾಂಗ್ರೆಸ್ ಗದ್ದಲ, ಗಂಡ-ಹೆಂಡತಿ ನಡುವೆ ಕೂಸು ಬಡವಾದ ಹಾಗಾಗಿದೆ‌. ರಾಜ್ಯದ ಜನತೆಗೆ ನಾವು ಅನ್ಯಾಯ‌ ಮಾಡುತ್ತಿದ್ದೇವೆ. ನಾನು ಸಭಾಪತಿಯಾಗಿ ಮಾತನಾಡುತ್ತಿಲ್ಲ. ಸಾಮಾನ್ಯ ಪ್ರಜೆಯಾಗಿ ಮಾತನಾಡುತ್ತಿದ್ದೇನೆ. ನಾವು ಜನರಿಗೆ ಮೋಸ, ಅವಮಾನ ಕೆಟ್ಟದ್ದು ಮಾಡುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾನು ಸಹ ವಿರೋಧ ಪಕ್ಷದವರ ಮನವೊಲಿಸಲು ಯತ್ನಿಸುತ್ತೇನೆ. ಇವರ ಗದ್ದಲದಿಂದ ಬಹಳಷ್ಟು ನೋವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!