ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯ ಮುಡಾ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಮತ್ತು ಹಗರಣ ಸಂಬಂಧ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದರು.
ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಇನ್ನು ಬೆಳಗಾವಿ ಗಾಂಧಿ ಭಾರತ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಮಂಗಳವಾರ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ. ನಂತರ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದರು.