ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ, ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ.ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ ಎಂದು ತಿಳಿಸಿದ್ದಾರೆ.

ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!