ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬದುಕಿನ ಕೊನೆಯ ಹಂತವನ್ನ ನೋಡಿ ಹೋರಾಟ ಮಾಡಿ ಬದುಕಿ ಬಂದಿದ್ದೇನೆ. ಇದಕ್ಕೆಲ್ಲ ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ ಕಾರಣ. ಬಹಳಷ್ಟು ಜನರಿಗೆ ಧನ್ಯವಾದ ಹೇಳ್ತೀನಿ. ಇದು ನನಗೆ ಬಹಳಷ್ಟು ಶಕ್ತಿ, ಧೈರ್ಯ ತಂದುಕೊಟ್ಟಿತು ಎಂದು ಹೇಳಿದ್ದಾರೆ.