ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗಿದೆ: ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಹುಲ್‌ ಗಾಂಧಿ ತಮ್ಮ ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ರಾಯ್‌ ಬರೇಲಿಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಲವೊಂದು ವಿಚಾರದ ಬಗ್ಗೆ ಗಂಭೀರವಾಗಿ ಧ್ವನಿಯೆತ್ತಿದರೆ, ಕೊನೆಗೆ ಹಾಸ್ಯಮಯ ಪ್ರಸಂಗ ಕೂಡ ನಡೆಯಿತು.

ಭಾಷಣದ ಕೊನೆಗೆ ಸಾರ್ವಜನಿಕರು ಅವರ ವೈವಾಹಿಕ ಜೀವನದ ಬಗ್ಗೆ ಕೇಳಿದ್ದಾರೆ. ನೀವು ಯಾವಾಗ ಮದುವೆಯಾಗುತ್ತೀರಿ ಎಂದು ನೆರೆದಿದ್ದ ಜನ ಕೇಳಿದ್ದಾರೆ. ಇದಕ್ಕೆ ನಗುತ್ತಲೇ ಪ್ರತಿಕ್ರಿಯಸಿದ ರಾಗಾ, ಈಗ ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗಿದೆ ಎಂದು ಹೇಳಿ ವೇದಿಕೆಯಿಂದ ತೆರಳಿದರು.

ರಾಹುಲ್‌ ಗಾಂಧಿಯವರು ಈ ಹಿಂದೆಯೂ ತಮ್ಮ ಮದುವೆ ವಿಚಾರವಾಗಿ ಸಾಕಷ್ಟು ಸುದ್ದಿಯಾಗಿದ್ದರು. ನನ್ನ ಬಾಳ ಸಂಗಾತಿಯಾಗುವವರಿಗೆ ತಾಯಿ ಸೋನಿಯಾ ಗಾಂಧಿ (Sonia Gandhi) ಮತ್ತು ಅಜ್ಜಿ ಇಂದಿರಾ ಗಾಂಧಿ (Indira Gandhi) ಇಬ್ಬರ ಗುಣಗಳು ಇರಬೇಕು. ಅಂತಹ ಸಂಗಾತಿಯೊಂದಿಗೆ ಜೀವನ ನಡೆಸಲು ನಾನು ಬಯಸುತ್ತೇನೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ರಾಯ್ ಬರೇಲಿಯಲ್ಲಿ ನಡೆದ ರ್‍ಯಾಲಿಯಲ್ಲಿ ಸಹೋದರಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!