ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ರಾಜಕೀಯ ನಾಯಕರು ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.
ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಗಣಪತಿ ಪೂಜೆ ಮಾಡಿದ್ದಾರೆ. ಐತಿಹಾಸಿಕ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು,ನಾನು ಗಣಪತಿ ಪೂಜೆ ಮಾಡಿದ್ದೀನಿ, ಗೆಲುವು ನನ್ನದೇ, ಯಾವುದೇ ಭಯ ಇಲ್ಲ ಎಂದು ಹೇಳಿದ್ದಾರೆ.