ಎಲ್ಲಾ ಇಲ್ಲಿಗೇ ಮುಕ್ತಾಯವಾಗುತ್ತದೆ ಎಂದು ಭಾವಿಸುತ್ತೇನೆ: ಸಿಂಧೂರ್‌ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರತಿಕ್ರಿಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ‌ʼಆಪರೇಷನ್‌ ಸಿಂಧೂರ್ʼ ಏರ್ ಸ್ಟ್ರೈಕ್ ನಲ್ಲಿ 100ಕ್ಕೂ ಅಧಿಕ ಮಂದಿ ಉಗ್ರರು ಮೃತಪಟ್ಟಿದ್ದು, ಈ ವಿಚಾರ ತಿಳಿಯುತ್ತಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಮುಂಜಾನೆ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆ ದಾಳಿ ನಡೆಸಿದ ಸ್ವಲ್ಪ ಸಮಯದ ನಂತರ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು. ಎಲ್ಲಾ ಇಷ್ಟಕ್ಕೇ ಮುಕ್ತಾಯವಾಗುತ್ತದೆ ಎಂದು ಭಾವಿಸುತ್ತೇನೆ. ಯುದ್ಧವು “ಬಹಳ ಬೇಗ” ಕೊನೆಗೊಳ್ಳುತ್ತದೆ ಎಂದು ಆಶಿಸುತ್ತೇನೆ ಎಂದು ಹೇಳಿದರು.

ಉಗ್ರ ದಾಳಿ ನಾಚಿಕೆಗೇಡಿನ ಸಂಗತಿ, ನಾವು ಓವಲ್ ಕಚೇರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಹಲ್ಗಾಮ್ ದಾಳಿ ಬಗ್ಗೆ ಕೇಳಿದ್ದೇವೆ. ಹಿಂದಿನ ಘಟನೆಗಳನ್ನು ಆಧರಿಸಿ ಏನಾದರೂ ಸಂಭವಿಸಲಿದೆ ಎಂದು ಜನರಿಗೆ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ಅವರು ಬಹಳ ಸಮಯದಿಂದ ಹೋರಾಡುತ್ತಿದ್ದಾರೆ. ನೀವು ನಿಜವಾಗಿಯೂ ಅದರ ಬಗ್ಗೆ ಯೋಚಿಸಿದರೆ ಅವರು ಅನೇಕ, ಹಲವು ದಶಕಗಳು ಮತ್ತು ಶತಮಾನಗಳಿಂದ ಹೋರಾಡುತ್ತಿದ್ದಾರೆ ಟ್ರಂಪ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!