ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯನವರು ಮಂತ್ರಿ ಸ್ಥಾನ ಕೊಡುತ್ತೇನೆ ಎಂದು ಪ್ರಾಮಿಸ್ ಮಾಡಿ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಕರೆಸಿಕೊಂಡಿದ್ದಾರೆ. ಹಾಗಾಗಿ ನನಗೆ ಮಂತ್ರಿ ಸ್ಥಾನ ಕೊಡುವ ವಿಶ್ವಾಸವಿದೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನದ ಆಸೆಯನ್ನು ಬಿಚ್ಚಿಟ್ಟಿದ್ದಾರೆ. ಮಂತ್ರಿ ಸ್ಥಾನ ಕೊಡ್ತೀವಿ ಅಂತ ಪ್ರಾಮಿಸ್ ಮಾಡಿ ಕರೆದುಕೊಂಡು ಹೋದರು. ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಬಂದೆ ಅದ್ರಲ್ಲಿ ಏನು ಮುಚ್ಚು ಮರೆ ಇಲ್ಲ. ಸಿಎಂ ಸಿದ್ದರಾಮಯ್ಯನವರು ಸಚಿವ ಸ್ಥಾನ ಕೊಡ್ತೀವಿ ಅಂತ ಹೇಳಿದ್ದಾರೆ. ಈಗಲೂ ಎರಡೂವರೆ ವರ್ಷ ಆದಮೇಲೆ ನಿಮ್ಮಗೆ ಸಚಿವ ಕೊಡ್ತೀನಿ ಅಂತ ಎಲ್ಲರ ಮುಂದೆ ಹಾಗೂ ಸಾರ್ವಜನಿಕ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ತಿಳಿಸಿದರು.
ಸಂಪುಟ ಪುನಾರಚನೆ ವೇಳೆ ನನ್ನನ್ನು ಪರಿಗಣಿಸುತ್ತಾರೆ ಎಂಬ ಭಾವನೆ ಇದೆ. ಸಚಿವ ಸ್ಥಾನ ಕೊಡುತ್ತಾರೆ ಎಂಬ ಭಾವನೆ ನನಗೂ ಇದೆ ಕ್ಷೇತ್ರದ ಜನರಿಗೂ ಇದೆ. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದು ನಾನೊಬ್ಬನೇ. ಪಕ್ಷವನ್ನು ಬಲಪಡಿಸಿ ಬೇಕು ಅಂದರೆ ಮಂತ್ರಿ ಸ್ಥಾನ ಕೊಡಬೇಕು ಅನ್ನೋದು ರಾಷ್ಟ್ರೀಯ ಲೆಕ್ಕಾಚಾರ.ನನಗೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂದು ಭಾವಿಸಿಕೊಂಡಿದ್ದೇನೆ ಎಂದು ಶಿವಲಿಂಗೇಗೌಡ ಹೇಳಿಕೆ ನೀಡಿದರು.