ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೇಗೆ ಬದಲಾಯಿಸಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಶ್ವತ್ಥನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರು ಬೆಂಗಳೂರಿಗೆ ಬಂದಿದ್ದು ಯಾಕೆ? ಕನಕಪುರದವರಿಗೆ, ರಾಮನಗರದವರಿಗೆ ಏನೂ ಬೇಡ್ವಾ ಎಂದು ಪ್ರಶ್ನಿಸಿದ್ದಾರೆ.
ಸಂವಿಧಾನದಲ್ಲಿ ಯಾರನ್ನ ಕೇಳ್ಬೇಕು ಅಂತೇನಿಲ್ಲ. ರಾಮನಗರ ಜಿಲ್ಲೆಯ ಹೆಸರನ್ನು ನಾವು ಬದಲಾವಣೆ ಮಾಡುತ್ತೇವೆ ಎಂದು ಖಡಕ್ ಆಗಿ ತಿಳಿಸಿದ್ದಾರೆ.