ದ್ವೇಷದ ರಾಜಕೀಯದಿಂದ ತಂದೆಯನ್ನು ಕಳೆದುಕೊಂಡೆ, ನನ್ನ ಪ್ರೀತಿಯ ದೇಶ ಕಳೆದುಕೊಳ್ಳಲ್ಲ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸುವ ಮೊದಲು, ರಾಹುಲ್ ಗಾಂಧಿ ಅವರು ಇಂದು ಭಾವನಾತ್ಮಕ ಟಿಪ್ಪಣಿಯನ್ನು ಹಂಚಿಕೊಂಡಿದ್ದಾರೆ.
ದ್ವೇಷದ ರಾಜಕೀಯದಿಂದ ತಂದೆಯನ್ನು ಕಳೆದುಕೊಂಡಿದ್ದೇನೆ ಮತ್ತು ತನ್ನ ಪ್ರೀತಿಯ ದೇಶವನ್ನು ಕಳೆದುಕೊಳ್ಳಲುಸಿದ್ಧವಾಗಿಲ್ಲ ಎಂದು ಹೇಳಿದರು.

ಇಂದು ಬೆಳಗ್ಗೆ ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರಗೆ ಚಾಲನೆ ನೀಡುವ ಮೊದಲು ರಾಹುಲ್‌ ಗಾಂಧಿ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿದರು.

ಮೇ 21, 1991 ರಂದು ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಎಲಂನ ಭಯೋತ್ಪಾದಕರಿಂದ ಆತ್ಮಾಹುತಿ ದಾಳಿಯಲ್ಲಿ ರಾಜೀವ್ ಗಾಂಧಿ ಹತ್ಯೆಯಾಗಿದ್ದರು.

ತಂದೆಯ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ರಾಹುಲ್‌ ಗಾಂಧಿ ಆ ಫೋಟೋದೊಂದಿಗೆ ಟ್ವೀಟ್‌ ಮಾಡಿದ್ದಾರೆ. ‘ದ್ವೇಷ ಮತ್ತು ವಿಭಜನೆಯ ರಾಜಕೀಯದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ನನ್ನ ಪ್ರೀತಿಯ ದೇಶವನ್ನೂ ನಾನು ಕಳೆದುಕೊಳ್ಳುವುದಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಿಗೆ, ನಾವು ಜಯಿಸುತ್ತೇವೆ’ ಎಂದು ತನ್ನ ತಂದೆಯ ಸ್ಮಾರಕಕ್ಕೆ ನಮನ ಸಲ್ಲಿಸಿದ ಬಳಿಕ ಟ್ವೀಟ್‌ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!