Saturday, June 25, 2022

Latest Posts

ನನಗೆ ಕರ್ನಾಟಕಕ್ಕೆ ಬರುವುದು ತುಂಬಾ ಇಷ್ಟ: ರಾಷ್ಟ್ರಪತಿ ಕೋವಿಂದ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಚಾಮರಾಜನಗರದಲ್ಲಿ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸಸ್​ (ಸಿಮ್ಸ್​) ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ , ನನಗೆ ಕರ್ನಾಟಕಕ್ಕೆ ಬರುವುದು ತುಂಬಾ ಇಷ್ಟ ಎಂದ ಅವರು, ನವರಾತ್ರಿ ಹಬ್ಬದಂದೇ ಸಿಮ್ಸ್​ ಉದ್ಘಾಟನೆ ಆಗುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.
ಕನ್ನಡದಲ್ಲೇ ಮಾತು ಆರಂಭಿಸಿದ ಅವರು, ಚಾಮರಾಜನಗರದಲ್ಲಿ‌ ಮೆಡಿಕಲ್ ಕಾಲೇಜ್ ಆರಂಭವಾಗಿರುವುದು ಖುಷಿಯ ವಿಚಾರ. ಕೊರೋನಾ ಸಂದರ್ಭದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಕರೊನಾ‌ ವಾರಿಯರ್ಸ್ ಆಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ. ನಮ್ಮ ದೇಶದ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳು ಭದ್ರ ಬುನಾದಿ ಎಂದ ಅವರು ದೇಶದ ಪ್ರತಿ ಮೂಲೆಗೂ ಆರೋಗ್ಯ ಸೇವೆ ವಿಸ್ತರಿಸುವುದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋತ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು ಸೇರಿ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss