ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಕಾನ್ಪುರದಲ್ಲಿ ‘ಐ ಲವ್ ಮುಹಮ್ಮದ್’ ಪೋಸ್ಟರ್ ವಿವಾದ ಉಲ್ಬಣಗೊಂಡಿದೆ. ರಾಯಬರೇಲಿಯಲ್ಲಿ ಶುಕ್ರವಾರ ನಮಾಜ್ ಪ್ರಾರ್ಥನೆಯ ನಂತರ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಗಲಭೆ ನಡೆದ ತಕ್ಷಣವೇ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದರು.
ಸೆಪ್ಟೆಂಬರ್ 4 ರಂದು ಪೊಲೀಸರು ‘ಐ ಲವ್ ಮುಹಮ್ಮದ್’ ಪೋಸ್ಟರ್ ಹೊಂದಿರುವ ಟೆಂಟ್ ಅನ್ನು ತೆಗೆದುಹಾಕಿದ ನಂತರ ಕಾನ್ಪುರದಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಧ್ವನಿ ಎತ್ತಲು ಮತ್ತು ಜ್ಞಾಪಕ ಪತ್ರವನ್ನು ಸಲ್ಲಿಸಲು ಧರ್ಮಗುರುವೊಬ್ಬರು ನೀಡಿದ ಕರೆಗೆ ಪ್ರತಿಕ್ರಿಯೆಯಾಗಿ ಶುಕ್ರವಾರದ ಪ್ರಾರ್ಥನೆಯ ನಂತರ ಬರೇಲಿಯ ಇಸ್ಲಾಮಿಯಾ ಮೈದಾನದ ಬಳಿ ಭಾರಿ ಜನಸಮೂಹ ಜಮಾಯಿಸಿತು. ಕೆಲವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದರು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಉತ್ತರ ಪ್ರದೇಶದ ಕಾನ್ಪುರದಲ್ಲಿ. ಅಲ್ಲಿ ಪ್ರವಾದಿ ಮೊಹಮ್ಮದ್ ಅವರ ಜನ್ಮದಿನವಾದ ಈದ್ ಮಿಲಾದ್ ಉನ್ ನಬಿ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆದಿತ್ತು. ಮೆರವಣಿಗೆಯಲ್ಲಿ ‘ಐ ಲವ್ ಮೊಹಮ್ಮದ್’ ಎಂಬ ಬರಹ ಇರುವ ನಾಮಫಲಕ ಬಳಸಲಾಗಿತ್ತು. ಆದರೆ, ಇದಕ್ಕೆ ಹಿಂದು ಸಮಾಜದ ಕೆಲವರಿಂದ ಆಕ್ಷೇಪ ವ್ಯಕ್ತವಾಗಿತ್ತು.