Tuesday, September 30, 2025

ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನೆ: ಮಾಸ್ಟರ್ ಮೈಂಡ್ ನದೀಮ್ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ನದೀಮ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ತೌಕೀರ್ ರಜಾ ಖಾನ್ ಅವರ ಆಪ್ತ ಸಹಾಯಕನಾಗಿದ್ದ ನದೀಮ್ ಘಟನೆ ಬಳಿಕ ತಲೆಮರಿಸಿಕೊಂಡಿದ್ದ. ಇದೀಗ ಪೊಲೀಸರು ಬಂಧಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ ವಾಟ್ಸಾಪ್ ಗ್ರೂಪ್ ರಚಿಸಿ ನದೀಮ್ ಹಿಂಸೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ.

ಹಿಂಸಾಚಾರವನ್ನು ಪ್ರಚೋದನೆ ಮಾಡಿದ ಆರೋಪದ ಮೇಲೆ ಪೊಲೀಸರು ವಶಕ್ಕೆ ಪಡೆದಿರುವ 26 ಶಂಕಿತರನ್ನು ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ಮೌಲಾನಾ ತೌಕೀರ್ ರಜಾ ಸೇರಿದಂತೆ ಒಟ್ಟು 34 ಆರೋಪಿಗಳನ್ನು ಬಂಧಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ.