ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆನ್‌ಡ್ರೈವ್‌ಗಳನ್ನ ದೇವರಾಜೇಗೌಡ, ಕಾರ್ತಿಕ್ ಸ್ವತಃ ಮಾರಾಟ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ರೊಂದಿಗೆ ಮಾತನಾಡಿಸಿ ನಾನು ತಪ್ಪು ಮಾಡಿದೆ ಎಂದು ಮಾಜಿ ಸಂಸದ ಶಿವರಾಮೇಗೌಡ ವಿಷಾದ ವ್ಯಕ್ತಪಡಿಸಿದರು. .
ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೆನ್ ಡ್ರೈವ್ ಕೇಸಲ್ಲಿ ಡಿಸಿಎಂ ಡಿಕೆಶಿ 100 ಕೋಟಿ ಆಫರ್ ನೀಡಿದ್ದರು. ಆಫರ್ ತಂದವರು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಎಂಬ ವಕೀಲ ದೇವರಾಜೇಗೌಡ ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಾನು ಶಿವಕುಮಾರ್ ಜೊತೆ ಮಾತನಾಡಿಸಿ ನಾನು ತಪ್ಪು ಮಾಡಿದ್ದೇನೆ ಎಂಬ ನೋವು ನನಗಿದೆ. ಪೆನ್‌ಡ್ರೈವ್‌ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.