ನನ್ನಿಂದ ತಪ್ಪಾಗಿದೆ…ಸುಪ್ರೀಂ ಕೋರ್ಟ್‌ನಲ್ಲಿ ಸಿಎಂ ಕೇಜ್ರಿವಾಲ್‌ ತಪ್ಪೊಪ್ಪಿಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಐಟಿ ಸೆಲ್‌ಗೆ (BJP IT Cell) ಸಂಬಂಧಿಸಿದ ಮಾನಹಾನಿಕರ ವಿಡಿಯೋವನ್ನು ರಿಟ್ವೀಟ್‌ ಮಾಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ದೆಹಲಿ ಸಿಎಂ ಕೇಜ್ರಿವಾಲ್ (Delhi CM Aravind Kejriwal) ಸುಪ್ರೀಂ ಕೋರ್ಟ್‌ನಲ್ಲಿ (Supreme Court) ತಪ್ಪು ಒಪ್ಪಿಕೊಂಡಿದ್ದಾರೆ.

ಅವಹೇಳನಕಾರಿ ವೀಡಿಯೊವನ್ನು ರಿಟ್ವೀಟ್ ಮಾಡುವ ಮೂಲಕ ತಾನು ತಪ್ಪು ಮಾಡಿದ್ದೇನೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ನ್ಯಾ. ಸಂಜೀವ್ ಖನ್ನಾ ಮತ್ತು ನ್ಯಾ. ದೀಪಂಕರ್ ದತ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಪ್ರಕರಣದ ವಿಚಾರಣೆಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಮಾರ್ಚ್ 11 ರವರೆಗೆ ತಡೆಹಿಡಿದಿದೆ.

ಏನಿದು ಪ್ರಕರಣ?
ಯೂಟ್ಯೂಬರ್‌ ಧ್ರುವ್‌ ರಥೀ ಅವರು 2018ರಲ್ಲಿ ಬಿಜೆಪಿ ಐಟಿ ಸೆಲ್‌ಗೆ ಸಂಬಂಧಿಸಿದಂತೆ , ‘ಐ ಸಪೋರ್ಟ್ ನರೇಂದ್ರ ಮೋದಿ’ ಎಂಬ ಪೇಜ್‌ ಅಡ್ಮಿನ್‌ ‘ಬಿಜೆಪಿ ಐಟಿ ಸೆಲ್ ಭಾಗ-2’ ನಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಥೀ ಟ್ವೀಟ್ ಮಾಡಿದ್ದರು. ಈ ಟ್ವೀಟ್‌ ಅನ್ನು ಕೇಜ್ರಿವಾಲ್‌ ಟ್ವೀಟ್‌ ಮಾಡಿದ್ದರು. ಕೇಜ್ರಿವಾಲ್‌ ತನ್ನ ವಿರುದ್ಧ ಸುಳ್ಳು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಐ ಸಪೋರ್ಟ್‌ ನರೇಂದ್ರ ಮೋದಿ ಪೇಜ್‌ ಅಡ್ಮಿನ್‌ ಮಾನನಷ್ಟ ಕೇಸ್‌ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗುವಂತೆ ದೆಹಲಿಯ ನ್ಯಾಯಾಲಯ 2019ರಲ್ಲಿ ಸಮನ್ಸ್‌ ಜಾರಿ ಮಾಡಿತ್ತು. ಈ ಸಮನ್ಸ್‌ ರದ್ದು ಪಡಿಸುವಂತೆ ಕೋರಿ ಕೇಜ್ರಿವಾಲ್‌ ನಂತರ ಸೆಶನ್ಸ್‌ ಕೋರ್ಟ್‌ ಮತ್ತು ಹೈಕೋರ್ಟ್‌ ಮೊರೆ ಹೋಗಿದ್ದರು. ದೆಹಲಿ ಹೈಕೋರ್ಟ್‌ ವಿಚಾರಣೆಗೆ ಹಾಜರಾಗುವಂತೆ ದೆಹಲಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್‌ ಸುಪ್ರೀಂ ಮೊರೆ ಹೋಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!