ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಯಕ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಸಧ್ಯಕ್ಕೆ ನಿವೃತ್ತಿ ಘೋಷಿಸುತ್ತಿಲ್ಲ ಎಂಬುದನ್ನು ಈಗಾಗಲೇ ಖಚಿತಪಡಿಸಿದ್ದಾರೆ. ಆದರೆ ವಿರಾಟ್ ಕೊಹ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ.
ಇದೀಗ ಐಪಿಎಲ್ 2025 ರ ಸೀಸನ್ ಆರಂಭಕ್ಕೂ ಮುನ್ನ ಮಾತನಾಡಿರುವ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿಜೀವನದ ಬಗ್ಗೆ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಆರ್ಸಿಬಿಯ ಕಾರ್ಯಕ್ರಮವೊಂದರಲ್ಲಿ ಮಾನಾಡಿರುವ ಕೊಹ್ಲಿ ‘ನಾನು ಮತ್ತೆ ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡದಿರಬಹುದು, ಆದ್ದರಿಂದ ಹಿಂದೆ ಏನೇ ನಡೆದರೂ ಅದರಲ್ಲಿ ನನಗೆ ತೃಪ್ತಿ ಇದೆ’ ಎಂದು ಹೇಳಿದ್ದಾರೆ.
ಇದಕ್ಕೆ ಪೂರಕವಾಗಿ, ಭಾರತ 2027 ರ ಕೊನೆಯಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿದೆ. ಕೊಹ್ಲಿ ಈ ಹೇಳಿಕೆ ನೀಡಿರುವುದನ್ನು ಗಮನಿಸಿದರೆ, ಕೊಹ್ಲಿ 2027 ರ ಅತ್ಯಂಕ್ಕೂ ಮುನ್ನ ಕ್ರಿಕೆಟ್ಗೆ ವಿದಾಯ ಹೇಳಬಹುದು ಎಂಬ ಚರ್ಚೆ ಶುರುವಾಗಿದೆ.