ನಾನು, ಶಾಸಕ ಯತ್ನಾಳ್ ಒಂದೇ ನಾಣ್ಯದ ಎರಡು ಮುಖವಲ್ಲ: ಎಂ.ಬಿ. ಪಾಟೀಲ್

ಹೊಸದಿಗಂತ ವರದಿ, ವಿಜಯಪುರ:

ನಾನು ಹಾಗೂ ಶಾಸಕ ಯತ್ನಾಳ ಒಂದೇ ನಾಣ್ಯದ ಎರಡು ಮುಖವಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಶಾಸಕ ಎಂ.ಬಿ. ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಇಬ್ಬರು ಒಳ್ಳೆಯ ಸ್ನೇಹಿತರು ಅಷ್ಟೇ. ಆದರೆ, ರಾಜಕೀಯ ಬೇರೆ ಆಗಿದೆ. ಇನ್ನು ಶಾಸಕ ಯತ್ನಾಳ ಬಗ್ಗೆ ನಾನು ಕಮೆಂಟ್ ಮಾಡಲ್ಲ ಎಂದರು.

ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವ ಪಕ್ಷ ಆಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದಾರೆ. ಆದರೆ, ಬಿಜೆಪಿ ಪಕ್ಷದವರು ಭಾಗಿ ಆಗಿಲ್ಲ ಎಂದರು.

ಅಲ್ಲದೇ, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಮ್ಮ ತಪ್ಪಿನ ಅರಿವು ಆಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!