ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಮತ್ತು ನನ್ನ ಮಗ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.
2014ರಲ್ಲಿ ಸಿಎಂ ಸಿದ್ದರಾಮಯ್ಯ ಅವರ ಒತ್ತಾಯದ ಮೇರೆಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದಿದ್ದೆ. ಆಗ ಹಿರಿಯರು ನನ್ನ ಮಗ ಗಣೇಶ್ ಹುಕ್ಕೇರಿಗೆ ಶಾಸಕ ಸ್ಥಾನ ನೀಡಿದ ನಂತರ ಮಂತ್ರಿ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಪುತ್ರ ಶಾಸಕನಾಗಿ ಆಯ್ಕೆಯಾಗಿದ್ದರೂ ಮಂತ್ರಿಯಾಗಲಿಲ್ಲ.
2023ರಲ್ಲಿ ಶಾಸಕ ಗಣೇಶ್ 78 ಸಾವಿರ ಮತಗಳ ಅಂತರದಿಂದ ಗೆದ್ದರೂ ಮಂತ್ರಿಯಾಗಲಿಲ್ಲ. ನಾನು ಅಥವಾ ನನ್ನ ಮಗ ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ಪ್ರಕಾಶ್ ಹುಕ್ಕೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಈಗ ಮತ್ತೊಮ್ಮೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಬಂದಿದೆ. ಚಿಕ್ಕೋಡಿ ಲೋಕಸಭೆಗೆ ಸ್ಪರ್ಧಿಸಿದರೆ ನಾವೇ ಗೆಲ್ಲುತ್ತೇವೆ ಎಂಬ ಲೆಕ್ಕಾಚಾರವಿದೆ. ಆದರೆ, ನಾನು ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.