ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ I.N.D.I.A ಬಣ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸದಿಗಂತ ವರದಿ, ಕುಶಾಲನಗರ:

ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ರಾಜ್ಯಸಭೆಯಲ್ಲಿ I.N.D.I.A  ಬಣದ ನಾಯಕರು ಸಿದ್ಧತೆ ನಡೆಸಿದ್ದಾರೆ.

ಇದುವರೆಗೆ 50ಕ್ಕೂ ಹೆಚ್ಚು ಸಂಸದರು ಈ ಮಸೂದೆಗೆ ಸಹಿ ಹಾಕಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ.

50ಕ್ಕೂ ಹೆಚ್ಚು ಸಂಸದರು ಸಹಿ ಹಾಕಿ ಕರಡು ಸಿದ್ಧಗೊಂಡ ಬಳಿಕ ರಾಜ್ಯಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ರಾಜ್ಯಸಭಾ ಸ್ಪೀಕರ್ ವಿಪಕ್ಷ ನಾಯಕರು ಮಾತನಾಡುವಾಗ ಅಡ್ಡಿಪಡಿಸಿ, ಸಮಯ ಮೀಸಲಿಡುವ ಮೂಲಕ ವಿಪಕ್ಷ ನಾಯಕರ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು I.N.D.I.A ಬ್ಲಾಕ್ ಮುಖಂಡರು ಆರೋಪಿಸಿದ್ದಾರೆ.

ಕಾಂಗ್ರೆಸ್ ಈ ವಿಷಯದ ಬಗ್ಗೆ ಮುಂದಾಳತ್ವ ವಹಿಸಿದೆ. ಟಿಎಂಸಿ ಮತ್ತು ಸಮಾಜವಾದಿ ಪಕ್ಷ, ಇತರ ಇಂಡಿಯಾ ಬ್ಲಾಕ್ ಪಕ್ಷಗಳು ಈ ಕ್ರಮಕ್ಕೆ ಬೆಂಬಲ ನೀಡಿವೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!