ಹೊಸದಿಗಂತ ಡಿಜಿಟಲ್ ಡೆಸ್ಕ್:
2029ರಲ್ಲೂ ವಿರೋಧ ಪಕ್ಷದಲ್ಲಿ ಕೂರಲು ಸಿದ್ಧರಾಗಬೇಕು ಎಂದು I.N.D.I.A ಬಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದ್ದಾರೆ.
ಚಂಡೀಗಢದಲ್ಲಿ ನೀರು ಸರಬರಾಜು ಯೋಜನೆ ನ್ಯಾಯ ಸೇತು ಮತ್ತು ಸ್ಮಾರ್ಟ್ ಸಿಟಿ ಮಿಷನ್ಗೆ ಚಾಲನೆ ನೀಡಿದ ಸಂದರ್ಭದಲ್ಲಿ ಈ ಹೇಳಿಕೆಗಳನ್ನು ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ ಅವರು, 2029ರ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಮತ್ತೆ ಎನ್ಡಿಎ ಗೆಲುವು ದಾಖಲಿಸಲಿದೆ ಎಂದರು.
2029ರಲ್ಲೂ ವಿರೋಧ ಪಕ್ಷದಲ್ಲಿ ಕೂರಲು I.N.D.I.A ಬಣ ತಯಾರಾಗಬೇಕು, ಪ್ರತಿಪಕ್ಷಗಳು ಏನು ಬೇಕಾದರೂ ಮಾಡಲಿ, 2029ರಲ್ಲಿ ಎನ್ಡಿಎ ಬರಲಿದೆ, ಮೋದಿಜಿ ಬರುತ್ತಾರೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್ ಪಡೆದ ಸ್ಥಾನಗಳಿಗಿಂತ ಹೆಚ್ಚು ಸ್ಥಾನಗಳನ್ನು ಈ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, I.N.D.I.A ಬಣವು ಅಸ್ಥಿರತೆಯನ್ನು ಸೃಷ್ಟಿಸಲು ಬಯಸುತ್ತದೆ ಮತ್ತು ಅವರು ವಿರೋಧ ಪಕ್ಷದಲ್ಲಿ ಕೆಲಸ ಮಾಡುವ ವಿಧಾನವನ್ನು ಕಲಿಯಬೇಕು ಎಂದು ಹೇಳಿದರು.