ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ವರ್ಷ ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟಕ್ಕೆ ಬರುವ ಹೊತ್ತಿಗೆ ನರೇಂದ್ರ ಮೋದಿ ಅವರೇ 3ನೇ ಬಾರಿ ಪ್ರಧಾನ ಮಂತ್ರಿಯಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿಕೊಂಡಿದ್ದೇನೆ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆಯಾದ ಶೋಭಾ ಕರಂದ್ಲಾಜೆ ಹೇಳಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ಕಡೆಯ ಆಷಾಢ ಶುಕ್ರವಾರದಂದು ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಅವರು, ಚಾಮುಂಡಿ ಬೆಟ್ಟದ ಪಾದಗಳ ಬಳಿ ಮಾಧ್ಯಮಗಳ ಜೊತೆ ಮಾತನಾಡಿ, ಪ್ರತಿ ವರ್ಷದಂತೆ ಈ ಬಾರಿಯೂ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಬರಿಗಾಲಲ್ಲಿ ಹತ್ತಿ ಚಾಮುಂಡೇಶ್ವರಿ ತಾಯಿಯ ದರುಶನ ಪಡೆಡಿದ್ದೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು 9 ವರ್ಷ ಅಧಿಕಾರಾವಧಿ ಪೂರೈಸಿದ್ದು. ಮುಂದಿನ ವರ್ಷ ಆಷಾಢ ಮಾಸಕ್ಕೆ ನಾನು ಬರುವ ಮುನ್ನ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಲಿ ಎಂದು ಚಾಮುಂಡೇಶ್ವರಿಯಲ್ಲಿ ಬೇಡಿಕೊಂಡಿದ್ದೇನೆ. ದೇಶದ ರಕ್ಷಣೆಗಾಗಿ, ಅಭಿವೃದ್ಧಿಗಾಗಿ ಇಡೀ ಪ್ರಪಂಚದಲ್ಲೇ ಭಾರತದ ಧ್ವಜವನ್ನು ಎತ್ತಿ ಹಿಡಿಯಲು ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಲಿ ಎಂದು ಆಷಾಡ ಶುಕ್ರವಾರವಾದ ಇಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಅಂತಾ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು.