ನಾನು ಮತ್ತೆ ಹೇಳುತ್ತಿದ್ದೇನೆ ಚೀನಾ ಭಾರತದ ಭೂಪ್ರದೇಶದ ಮೇಲೆ ಆಕ್ರಮಣ ಮಾಡುತ್ತಿದೆ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದ ಭೂಪ್ರದೇಶದ ಮೇಲೆ ಚೀನಾ ಆಕ್ರಮಣ ಮಾಡುತ್ತಿದೆ ಎಂದುಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು, ಒಂದು ಇಂಚು ಭೂಮಿಯನ್ನು ಆಕ್ರಮಿಸಿಲ್ಲ ಎಂದು ಹೇಳುತ್ತಾರೆ. ಅದು ಸಂಪೂರ್ಣ ಸುಳ್ಳು. ಲಡಾಖ್’ಗೆ ನಾನು ಭೇಟಿ ನೀಡಿದ್ದೇನೆ. ಚೀನಾ ಭಾರತೀಯ ಭೂಮಿಯ ಮೇಲೆ ಒಳನುಗ್ಗಿರುವುದು ಸತ್ಯ ಎಂದು ಹೇಳಿದ್ದಾರೆ.

ಇದೇ ವೇಳೆ ಚೀನಾ ತನ್ನ ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ಸೇರಿಸಿರುವ ಕುರಿತು ಪ್ರಶ್ನೆಗೆ ಉತ್ತರಿಸಿ, ನಕ್ಷೆಯ ಪ್ರಶ್ನೆ ಬಹಳ ಗಂಭೀರವಾದದ್ದು, ಆದರೆ, ಅವರು (ಚೀನಾ) ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಧಾನಿ ಕೂಡ ಈ ವಿಷಯದ ಬಗ್ಗೆ ಮಾತನಾಡಬೇಕು ಎಂದು ಆಗ್ರಹಿಸಿದರು.

ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಪ್ರದೇಶದ ಭಾಗವಾಗಿ ಚೀನಾ ತೋರಿಸುತ್ತಿದೆ. ಈ ತಿಂಗಳ ಆರಂಭದಲ್ಲಿ, ಲಡಾಖ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!