ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರಕಾರದಿಂದ ಲಿಂಗಾಯಿತ ಅಧಿಕಾಗಳಿಗೆ ಅನ್ಯಾಯವಾಗಿದ್ದು ನಿಜ. ಒಬ್ಬ ಜಿಲ್ಲಾಧಿಕಾರಿಯನ್ನೂ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು, ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು ಸತ್ಯ.ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ ಎಲ್ಲಿ ತೊಂದರೆಯಾಗಿದೆ ಎಂಬುದನ್ನು ಹೇಳುತ್ತೇನೆ ಎಂದು ಹೇಳಿದ್ದಾರೆ.
ದಾವಣಗೆರೆಯ 7 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಆ ಬಗ್ಗೆ ನಾನು ಪ್ರಶ್ನೆ ಮಾಡುತ್ತಿಲ್ಲ. ಲಿಂಗಾಯಿತ ಐಎಎಸ್, ಕೆಎಸ್‌ಎಸ್, ಐಪಿಎಸ್ ಅಧಿಕಾರಿಗಳ ಬಗ್ಗೆ ಹೇಳುತ್ತಿದ್ದೇನೆ. ನಾನು ಸತ್ಯ ಹೇಳಿದ್ದೇನೆ ಎಂದರು.