ನಾನು ಕಂಡ ‘ಕಾಂತಾರ’: ರಿಷಬ್​ ಶೆಟ್ಟಿಗೆ ದೀರ್ಘ ಪತ್ರ ಬರೆದ ಕಮಲ್​ ಹಾಸನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಮಲ್​ ಹಾಸನ್​ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳನ್ನು ಹಂಚಿಕೊಂಡಿದ್ದಾರೆ.

ಈ ಸಿನಿಮಾ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ಅವರು, ರಿಷಬ್​ ಶೆಟ್ಟಿಗೆ ದೀರ್ಘ ಪತ್ರ ಬರೆದಿದ್ದಾರೆ. ‘ಕಾಂತಾರ’ ಕುರಿತು ತಮಗೆ ಏನೆಲ್ಲ ಅನಿಸಿದೆ ಎಂಬುದನ್ನು ಅವರು ಈ ಪತ್ರದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ರಿಷಬ್​ ಶೆಟ್ಟಿಗೆ ಸಲಹೆಯನ್ನೂ ನೀಡಿದ್ದಾರೆ.

ಈ ಪತ್ರ ಕಂಡು ರಿಷಬ್​ ಶೆಟ್ಟಿ ತುಂಬ ಸಂತಸಗೊಂಡಿದ್ದು, ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಭಾರತೀಯ ಸಿನಿಮಾ ಲೋಕದ ದಿಗ್ಗಜ ನಟನಿಂದ ಈ ಪತ್ರ ಬಂದಿದೆ. ಕಮಲ್​ ಸರ್​ ನೀಡಿದ ಈ ಅಚ್ಚರಿಯ ಗಿಫ್ಟ್​ ನೋಡಿ ಅಪಾರ ಸಂತಸ ಆಗಿದೆ’ ಎಂದು ರಿಷಬ್​ ಶೆಟ್ಟಿ ಮಾಡಿರುವ ಈ ಪೋಸ್ಟ್​ ವೈರಲ್​ ಆಗಿದೆ.

ಈ ಮೊದಲೇ ಕಮಲ್​ ಹಾಸನ್​ ಅವರು ‘ಕಾಂತಾರ’ ಸಿನಿಮಾ ನೋಡಿದ್ದರು. ಆಗಲೂ ಅವರು ಫೋನ್ ಮೂಲಕ ರಿಷಬ್​ ಶೆಟ್ಟಿಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ‘ಈಗಾಗಲೇ ನಾನು ಫೋನ್​ನಲ್ಲಿ ಹೇಳಿದಂತೆ ಕಾಂತಾರ ಸಿನಿಮಾದ ದಾಖಲೆಯನ್ನು ನಿಮ್ಮ ಮುಂದಿನ ಸಿನಿಮಾದಿಂದ ಮುರಿಯಿರಿ’ ಎಂದು ಸಲಹೆ ನೀಡುವ ಮೂಲಕ ಕಮಲ್​ ಹಾಸನ್​ ಅವರು ಪತ್ರವನ್ನು ಪೂರ್ಣಗೊಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!