ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಹಾಸನ:
ಮುಂದಿನ ಎರಡು ವರ್ಷಗಳ ಅವಧಿಗೆ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ನಾಯಕರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಮುಂದಿನ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳ ಕಡೆಗೆ ಹೆಚ್ಚು ಗಮನ ಹರಿಸುವೆ ಎಂದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಗಮನ ಹರಿಸುವುದರ ಜೊತೆಗೆ ಆಯಾ ಜಿಲ್ಲೆ ಗಳಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಗಮನ ಹರಿಸಲಾಗುವುದು ಎಂದರು.