ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು, ಬೇರೆಯವರ ಜತೆಗಿದ್ದಂತೆ ಇದ್ದರೆ ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಆಗಿ ಮಾತನಾಡಿದ್ದಾರೆ. ನಮ್ಮ ಮೆಟ್ರೋ ನಾಗಸಂದ್ರ ಮಾದಾವರ ವಿಸ್ತರಿತ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡುವ ಸಂದರ್ಭ ತೇಜಸ್ವಿ ಸೂರ್ಯ ಕೇಳಿದ ಪ್ರಶ್ನೆಗೆ ಡಿಕೆ ಶಿವಕುಮಾರ್ ಈ ರೀತಿ ಉತ್ತರ ನೀಡಿದ್ದಾರೆ.
ಮೆಟ್ರೋ ರೈಲು ಸೇವೆಗೆ ಚಾಲನೆ ನೀಡುವ ಮುನ್ನ ಡಿಕೆ ಶಿವಕುಮಾರ್ ಹಾಗೂ ತೇಜಸ್ವಿ ಸೂರ್ಯ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರದಲ್ಲಿ ಭಾಗಿಯಾದರು. ಇದೇ ವೇಳೆ, ಅನುದಾನ ವಿಚಾರವಾಗಿ ತೇಜಸ್ವಿ ಸೂರ್ಯ ಪ್ರಸ್ತಾಪಿಸಿದರು. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ನೀಡಿದಾಗ, ಜಯನಗರವನ್ನು ಕಡೆಗಣಿಸಿದ ಬಗ್ಗೆ ತೇಜಸ್ವಿ ಸೂರ್ಯ ಪ್ರಸ್ತಾಪಿಸಿದರು.
ತೇಜಸ್ವಿ ಸೂರ್ಯ ಮಾತಿಗೆ ಉತ್ತರಿಸಿದ ಡಿಕೆಶಿ, ಜಯನಗರ ಶಾಸಕ ಸಿಕೆ ರಾಮಮೂರ್ತಿಯ ಮಾತು ಹೆಚ್ಚಾಯಿತು. ಆಸ್ಪತ್ರೆಯನ್ನು ಕಿತ್ತುಹಾಕಿಸಿದ್ದೇನೆ, ನನ್ನ ಬಳಿ ತಗ್ಗಿ ಬಗ್ಗಿ ಇರಬೇಕು. ಬೇರೆಯವರ ರೀತಿ ಇದ್ದಹಾಗೆ ನನ್ನ ಹತ್ತಿರ ಇದ್ದರೆ ಆಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.