ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ದೆಹಲಿಗೆ ಹೋಗ್ಬೇಕಿತ್ತು. ಹಾಗಾಗಿ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿ ಹೊರಟೆ. ಈ ಕುರಿತು ಸಿಎಂಗೆ ತಿಳಿಸಿದ್ದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದು ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಇಲ್ಲಿಂದ ದೆಹಲಿಗೆ 7:30ಕ್ಕೆ ತಲುಪಿ, 9ಕ್ಕೆ ವಾಪಸ್ ಬಂದಿದ್ದೇನೆ. ಖಾಸಗಿ ಕಾರ್ಯಕ್ರಮಕ್ಕೆ ಹೋಗಿದ್ದೆ, ಮುಗಿಸಿಕೊಂಡು ಬಂದೆ. ಅದು ಬಿಟ್ಟರೆ ಯಾವ ರಾಜಕಾರಣವೂ ಇಲ್ಲ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರಿಗೆ ಅವಮಾನ ಆಯ್ತು ಎಂದು ಬಿಜೆಪಿಯವರು ಹೇಳಿದ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಯಾವತ್ತೂ ನನ್ನ ಮೇಲೆ ಪ್ರೀತಿ ಜಾಸ್ತಿ ಎಂದು ಹೇಳಿದರು.
ಈ ಕುರಿತಾಗಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆ ವೇಳೆಯಲ್ಲಿ ಇರಲಿಲ್ಲ. ಹಾಗಾಗಿ ಅವರ ಹೆಸರು ತೆಗೆದುಕೊಳ್ಳಲಿಲ್ಲ. ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ ಎಂದು ಹೇಳಿದ್ದಾರೆ.