ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ವೀಕೆಂಡ್ ವಿತ್ ರಮೇಶ್ ಶೋನ ಸಾಧಕರ ಸೀಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಕೂರಲಿದ್ದಾರೆ.
ಈಗಾಗಲೇ ಕಾರ್ಯಕ್ರಮದ ಪ್ರೋಮೊ ಎಲ್ಲೆಡೆ ವೈರಲ್ ಆಗಿದ್ದು, ಚೇರ್‌ನಲ್ಲಿ ಕೂರೋಕೆ ಡಿಕೆಶಿ ಅವರಿಗೆ ರೈಟ್ ಟೈಮ್ ಇದಾಗಿದೆ ಎಂದು ಅಭಿಮಾನಿಗಳು ಹೇಳಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಡಿಕೆಶಿ ಅವರನ್ನು ಕಾರ್ಯಕ್ರಮಕ್ಕೆ ಕರೆದಿದ್ದು, ತಮ್ಮ ಬಾಲ್ಯದ ದಿನಗಳ ಬಗ್ಗೆ ಮಾತನಾಡಿದ್ದಾರೆ. ನಾನು ಏಳನೇ ತರಗತಿಯಲ್ಲಿ ಇದ್ದಾಗಲೇ ರಾಜಕಾರಣಿ ಆಗ್ತೀನಿ ಎಂದು ನಿರ್ಧಾರ ಮಾಡಿಬಿಟ್ಟಿದ್ದೆ ಎಂದು ಡಿಕೆಶಿ ಹೇಳಿದ್ದಾರೆ.
ಡಿಕೆಶಿ ಅವರ ಮನೆಯವರು, ಸಿಎಂ ಸಿದ್ದರಾಮಯಯ್ಯ ಹೀಗೆ ಸಾಕಷ್ಟು ರಾಜಕೀಯ ಗಣ್ಯರು ಡಿಕೆಶಿ ಬಗ್ಗೆ ಮಾತನಾಡಿದ್ದು, ಶೋ ಸಿಕ್ಕಾಪಟ್ಟೆ ಇಂಟ್ರೆಸ್ಟಿಂಗ್ ಆಗಿ ಇರಲಿದೆ ಎನ್ನುವ ಜನರ ಅಭಿಪ್ರಾಯ.