ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಸಭೆ ನಡೆಸಲು ನನಗೆ ಅವಕಾಶ ನೀಡಿಲ್ಲ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಸತ್ ಭವನದ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾನ್ಯವಾಗಿ, ಭಾರತಕ್ಕೆ ಯಾರೇ ಭೇಟಿ ನೀಡಿದರೂ ಅವರ ಜೊತೆ ಪ್ರತಿಪಕ್ಷದ ನಾಯಕರು ಸಭೆ ನಡೆಸುವುದು ಶಿಷ್ಟಾಚಾರ. ಇದು ವಾಜಪೇಯಿ, ಮನಮೋಹನ್ ಸಿಂಗ್ ಸರ್ಕಾರದಲ್ಲಿ ನಡೆಯುತ್ತಿತ್ತು. ಆದರೆ ಈಗ ಈ ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ ಎಂದು ದೂರಿದರು.
ನಾನು ವಿದೇಶಕ್ಕೆ ಹೋದಾಗ ವಿಪಕ್ಷ ನಾಯಕನನ್ನು ಭೇಟಿ ಮಾಡಬಾರದು ಎಂದು ಅವರು ಸೂಚಿಸುತ್ತಾರೆ. ನಾವು ಭಾರತವನ್ನು ಪ್ರತಿನಿಧಿಸುತ್ತೇವೆ. ಆದರೆ ಈ ಸರ್ಕಾರ ನಾವು ವಿದೇಶಿ ಗಣ್ಯರನ್ನು ಭೇಟಿ ಮಾಡಲು ಬಯಸುವುದಿಲ್ಲ. ಅಭದ್ರತೆಯ ಕಾರಣದಿಂದಾಗಿ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ಶಿಷ್ಟಾಚಾರವನ್ನು ಅನುಸರಿಸುತ್ತಿಲ್ಲ ಎಂದು ಹೇಳಿದರು.
ಪುಟಿನ್ ಜೊತೆ ಸಭೆಗೆ ನನಗೆ ಅವಕಾಶ ನೀಡಿಲ್ಲ: ರಾಗಾ ನಾಖುಷ್!

