ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾನು ಸನಾತನ ಧರ್ಮಕ್ಕೆ (Sanatan Dharma) ಹುಟ್ಟಿಲ್ಲ, ನನ್ನ ಅಮ್ಮ, ಅಪ್ಪನಿಗೆ ಹುಟ್ಟಿದ್ದೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ (Prakash Rai) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ನಲ್ಲಿ ನಡೆದ ಗೌರಿನೆನಪು (Gauri Nenapu) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಟ್ವಿಟರ್ನಲ್ಲಿ ‘ಸನಾತನಿ ಸಂಸತ್’ ಎಂದು ಪೋಸ್ಟ್ ಮಾಡಿದ್ದೆ. ಅದಕ್ಕೆ, ‘ನೀನು ಸನಾತನ ಧರ್ಮ ಅಲ್ವಾ’ ಎಂದು ಒಬ್ಬ ಪ್ರಶ್ನೆ ಕೇಳಿದ. ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ. ನಾನು ನಮ್ಮ ಅಮ್ಮ, ಅಪ್ಪನಿಗೆ ಹುಟ್ಟಿದ್ದೇನೆ ಎಂದೆ ಎಂದು ಪ್ರಕಾಶ್ ರೈ ಹೇಳಿದ್ದಾರೆ.
ನಾನು ಧರ್ಮದ ವಿರುದ್ಧ ಅಲ್ಲ. ಆದರೆ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ. ಅವರು ಸಂಸತ್ ಭವನದ ಉದ್ಘಾಟನೆ ವೇಳೆ ಹೋಮ ಹವನ ಮಾಡಿಸಿದರು. ಅದು ನಮ್ಮ ಸಂಸತ್ ಭವನ. ಅದರಲ್ಲಿ ಹೋಮ ಹವನ ಮಾಡಬಾರದು. ಯಾವುದನ್ನೂ ಸಹ ನಮ್ಮ ಮೇಲೆ ಬಲವಂತವಾಗಿ ಹೇರಬಾರದು. ಆದರೆ, ಮೋದಿಯಿಂದ ಅದು ಆಗುತ್ತಿದೆ, ಅದಕ್ಕೆ ನನ್ನ ವಿರೋಧವಿದೆ ಎಂದು ಪ್ರಕಾಶ್ ರೈ ಹೇಳಿದರು.