ಪ್ರಧಾನಿ ಸ್ಥಾನಕ್ಕೆ ಆಫರ್ ಬಂದಿತ್ತು, ಆದ್ರೆ ನಾನೇ ತಿರಸ್ಕರಿಸಿದೆ: ಗಡ್ಕರಿ ಸ್ಫೋಟಕ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2024ರ ಲೋಕಸಭೆ ಚುನಾವಣೆ ವೇಳೆ ರಾಜಕೀಯ ಮುಖಂಡರೊಬ್ಬರು ಪ್ರಧಾನಿ ಹುದ್ದೆಗೆ ನನ್ನನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದರು. ಆದರೆ, ನಾನು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

ನಾಗ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದಾಗ ನಡೆದ ಘಟನೆಯೊಂದು ನನಗೆ ಈಗಲೂ ನೆನಪಿದೆ. ನಾನು ಯಾರನ್ನೂ ಹೆಸರಿಸಲ್ಲ, ಆದರೆ ವ್ಯಕ್ತಿ ಹೇಳಿದರು, ನೀವು ಪ್ರಧಾನಿಯಾಗಲು ಬಯಸಿದರೆ, ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು, ಆದರೆ ನಾನು ಪ್ರಸ್ತಾಪವನ್ನು ನಿರಾಕರಿಸಿದೆ. ನನಗೆ ಅಂತಹ ಯಾವುದೇ ಮಹತ್ವಾಕಾಂಕ್ಷೆ ಇಲ್ಲ ಎಂದು ಹೇಳಿದ್ದಾರೆ.

ಬಳಿಕ ನೀವು ನನ್ನನ್ನು ಏಕೆ ಬೆಂಬಲಿಸಬೇಕು? ನಾನು ನಿಮ್ಮ ಬೆಂಬಲವನ್ನು ಏಕೆ ಸ್ವೀಕರಿಸಬೇಕು? ಎಂದು ಕೇಳಿದೆ. ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ, ನಾನು ನನ್ನ ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹುದ್ದೆಗಾಗಿ ನನ್ನ ತತ್ವಗಳಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!