ಹೊಸದಿಗಂತ ವರದಿ ಹಾಸನ:
ನಗರದ ಎಂ.ಜಿ. ರಸ್ತೆಯಲ್ಲಿರುವ ಒಕ್ಕಲಿಗರ ಹಾಸ್ಟೆಲ್ನಲ್ಲಿ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಅರಕಲಗೂಡು ತಾಲ್ಲೂಕಿನ ಹಡೇನಹಳ್ಳಿ ಗ್ರಾಮದ ಲಕ್ಷ್ಮಿ ಹೆಚ್.ಜೆ. ಎಂದು ಗುರುತಿಸಲಾಗಿದೆ. ಹಾಸನದ ಸೆಂಟ್ರಲ್ ಕಾಮರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿನಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಅದರಲ್ಲಿ, “ನನಗೆ ಜೀವನ ಅನ್ಯಾಯ ಮಾಡಿತು ಅಮ್ಮಾ. ಬದುಕೋಕೆ ಆಗದಷ್ಟು ವೀಕ್ ಆಗಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ನನ್ನನ್ನು ಕ್ಷಮಿಸಿ” ಎಂದು ಬರೆದಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:
ಹಾಸನ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿನಿಯ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.



