NDA ಜೊತೆ ನಾನು ಸದಾ ಇರುವೆ: ಪ್ರಧಾನಿ ಮೋದಿಗೆ ನಿತೀಶ್ ಕುಮಾರ್ ಭರವಸೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ದೊಂದಿಗೆ ನಾನು ಸದಾ ಇರುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭರವಸೆ ನೀಡಿದ್ದಾರೆ.

ಬಿಹಾರ ರಾಜ್ಯದಲ್ಲಿ ಕೇಂದ್ರ ಕೈಗೊಳ್ಳಲಿರುವ ₹21,400 ಕೋಟಿ ಮೊತ್ತದ ಕಾಮಗಾರಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಮಾತನಾಡಿದ ನಿತೀಶ್, ‘ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟವು 400ಕ್ಕಿಂತಲೂ ಅಧಿಕ ಸ್ಥಾನ ಗೆಲ್ಲಲಿದೆ.ನಾನು ಎನ್‌ಡಿಎ ಜತೆ ಸದಾ ಇರುತ್ತೇನೆ’ ಎಂದು ಭರವಸೆ ನೀಡಿದರು.

ಬಿಹಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಕೆಲಸಗಳು ಈಗ ತ್ವರಿತಗತಿಯಲ್ಲಿ ಸಾಗಲಿದೆ ಹಾಗೂ ರಾಜ್ಯವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ. ಬಿಹಾರದ ಜನ ಹಿಂದಿಗಿಂತಲೂ ಈಗ ಹೆಚ್ಚು ಆರ್ಥಿಕವಾಗಿ ಸಬಲರಾಗಿರುವ ಭಾವವನ್ನು ಅನುಭವಿಸುತ್ತಿದ್ದಾರೆ’ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!