ಐದು ವರ್ಷ ನಾನೇ ಮುಖ್ಯಮಂತ್ರಿ: ಸಿಎಂ ಸಿದ್ದರಾಮಯ್ಯ ಖಡಕ್ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಐದು ವರ್ಷಗಳ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐದು ವರ್ಷ ನಮ್ಮದೇ ಸರ್ಕಾರ ನಾನು ಈಗ ಮುಖ್ಯಮಂತ್ರಿ. ನಾನೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯುವೆ.ಕೆಲಸ ಇಲ್ಲದೇ ಇರೋರು ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾತನಾಡ್ತಾರೆ. ನಮ್ಮ ಸರ್ಕಾರ ಸುಭದ್ರವಾಗಿದೆ. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡೋದು ಹೈಕಮಾಂಡ್‌ಗೆ ಬಿಟ್ಟಿರೋದು. ನಮ್ಮದು ನ್ಯಾಷನಲ್ ಪಾರ್ಟಿ, ಏನೇ ತೀರ್ಮಾನ ಆದ್ರು ಹೈಕಮಾಂಡ್ ಜೊತೆ ಚರ್ಚೆ ಮಾಡಿನೇ ಆಗೋದು ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಅವರು ಅಧಿಕಾರಕ್ಕೆ ಬರುವಲ್ಲಿ ಸೋತಿದ್ದಾರೆ. ಈಗ ಅವರಿಗೆ ಬೇರೆ ಕೆಲಸ ಇಲ್ಲದ್ದೇ ಬಾಯಿಗೆ ಬಂದಂಗೆ ಮಾತಾಡ್ತಾನೆ. ರಾಜ್ಯದ ಜನರು ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡ್ತೇವೆ. ಬಿಜೆಪಿಯವರು ಭ್ರಮ ನಿರಸವಾಗಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರೋಕೆ ಆಗಲ್ಲ. ಮತ್ತೆ ಅಪರೇಷನ್ ಮಾಡೋಕೆ ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!