ಹೊಸದಿಗಂತ ಡಿಜಿಟಲ್ ಡೆಸ್ಕ್:
5 ವರ್ಷವೂ ನಾನೇ ಸಿಎಂ, ನಮ್ಮ ಸರ್ಕಾರ ಬಂಡೆ ತರ ಇರುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರದಲ್ಲಿಂದು ಕ್ಯಾಬಿನೆಟ್ ಸಭೆಗೂ ಮುನ್ನ ನಂದಿ ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, 5 ವರ್ಷ ನಾನೇ ಸಿಎಂ ಆಗಿರ್ತೀನಿ. ನಮ್ಮ ಸರ್ಕಾರ ಬಂಡೆ ತರ ಇರುತ್ತೆ. ನಿಮಗ್ಯಾಕೆ ಅನುಮಾನ ಬಂದಿದೆ? ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿಯವರು ಹಗಲು ಕನಸು ಕಾಣ್ತಿದ್ದಾರೆ. ಸುಳ್ಳು ಹೇಳಿಕೊಂಡು ಜನರನ್ನ ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಬಿಟ್ರೆ, ಬೇರೆನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.