ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನನ್ನ ದೆಹಲಿ ಪ್ರವಾಸದ ಬಗ್ಗೆ ಚರ್ಚೆ ಏನು ಬೇಕಾದರೂ ಮಾಡಿಕೊಳ್ಳಿ. ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ಹೋಗಿರುವ ಕೆಲಸದ ಬಗ್ಗೆ ಮಾತ್ರ ಹೇಳುತ್ತೇನೆ. ಸಿಎಂ ಹೇಳಿದ ಮೇಲೆ ಇನ್ನೇನಿದೆ? ಅವರು ಏನು ಹೇಳುತ್ತಾರೋ, ನಾವು ಹಾಗೆ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಸ್ಪರ್ಧೆಯಲ್ಲಿ ಇರುವವರನ್ನು ತಪ್ಪಿಸಲು ಆಗಲ್ಲ. ಸ್ಪರ್ಧೆಯಲ್ಲಿ ಇರಬೇಡಿ ಎಂದು ಹೇಳಲು ಆಗಲ್ಲ. ಪ್ರಜಾಪ್ರಭುತ್ವದಲ್ಲಿ ಕೇಳೋದು ಅವರ ಹಕ್ಕು. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೇಳುವ, ಕೇಳುವ ಹಕ್ಕು ಎಲ್ಲರಿಗೂ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಪೂರ್ಣಾವಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದಿದ್ದಾರೆ.

